ಬೆಂಗಳೂರು : ಅನಾರೋಗ್ಯದಿಂದ ಕಾಂಗ್ರೆಸ್ ಶಾಸಕ ಹೆಚ್.ವೈ ಮೇಟಿ ನಿಧನರಾಗಿದ್ದು, ಇಂದು ಮಧ್ಯಾಹ್ನ 2 ಗಂಟೆಗೆ ಅವರ ಅಂತ್ಯಕ್ರಿಯೆ ನೆರವೇರಲಿದೆ .
ಇಂದು ಮಧ್ಯಾಹ್ನ 2 ಗಂಟೆಗೆ ಬಾಗಲಕೋಟೆ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಸಕ ಹೆಚ್.ವೈ ಮೇಟಿ ಅಂತ್ಯಕ್ರಿಯೆ ನಡೆಯಲಿದೆ. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿರಲಿದ್ದಾರೆ. ಇಂದು ಬೆಳಗ್ಗೆ 10 ಗಂಟೆಯಿಂದ ಮೇಟಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ಸ್ವಗ್ರಾಮಕ್ಕೆ ಕೊಂಡೊಯ್ಯಲಾಗುತ್ತದೆ. ಬಳಿಕ ಅಂತಿಮ ವಿಧಿ ವಿಧಾನ ನಡೆಯಲಿದೆ.
ಇಷ್ಟುಬೇಗ ಇಹಲೋಕ ತ್ಯಜಿಸುತ್ತಾರೆಂದು ಭಾವಿಸಿರಲಿಲ್ಲ : ಸಿಎಂ ಸಿದ್ದರಾಮಯ್ಯ
ಮಾಜಿ ಸಚಿವರು, ಹಿರಿಯ ನಾಯಕರು ಹಾಗೂ ಹಾಲಿ ಶಾಸಕರೂ ಆಗಿದ್ದ ಹೆಚ್.ವೈ.ಮೇಟಿಯವರು ನಿಧನರಾಗಿದ್ದಾರೆ. ನಾನು ಮೂರು ದಿನಗಳ ಹಿಂದೆ ಅವರನ್ನು ಭೇಟಿ ಮಾಡಿ ಅವರ ಆರೋಗ್ಯವನ್ನು ವಿಚಾರಿಸಿದ್ದೆ. ವೈದ್ಯರೂ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ತಿಳಿಸಿದ್ದರು. ಆದರೆ ಮೇಟಿಯವರು ಇಷ್ಟುಬೇಗ ಇಹಲೋಕ ತ್ಯಜಿಸುತ್ತಾರೆಂದು ಭಾವಿಸಿರಲಿಲ್ಲ. ಅತ್ಯಂತ ನಿಷ್ಠಾವಂತ ರಾಜಕಾರಣಿಯಾಗಿದ್ದು, ನನಗೆ ಅತ್ಯಂತ ಆಪ್ತರಾಗಿದ್ದರು. ಮೇಟಿಯವರು ಅರಣ್ಯ ಸಚಿವರಾಗಿ, ಸಂಸದರಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಮೂಲತ: ಕೃಷಿಕರಾಗಿದ್ದ ಮೇಟಿಯವರು ರಾಜಕೀಯ ಕ್ಷೇತ್ರದಲ್ಲಿಯೂ ಸಕ್ರಿಯರಾಗಿದ್ದರು. 1989ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಶಾಸಕರಾಗಿ ಸ್ಪರ್ಧಿಸಿ ಮೂರು ಬಾರಿ ಶಾಸಕರಾಗಿದ್ದರು. ಜನಪರ ಕಾಳಜಿಯಿಂದ ಸೇವೆ ಸಲ್ಲಿಸುತ್ತಿದ್ದ ಮೇಟಿಯವರು ಮಂತ್ರಿಯಾಗಿರಲಿ, ಸಂಸದರಾಗಿ, ಶಾಸಕರಾಗಿರಲಿ, ಪಕ್ಷಕ್ಕೆ ನಿಷ್ಠೆಯಿಂದ ದುಡಿಯುವಂತಹ ಪ್ರಾಮಾಣಿಕ ವ್ಯಕ್ತಿಯಾಗಿದ್ದರು. ಜನರೊಂದಿಗಿನ ಒಡನಾಟ ಹಾಗೂ ಜನಪ್ರಿಯತೆಯಿಂದ ಬಾಗಲಕೋಟೆ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಅಂತಹ ನಿಷ್ಠಾವಂತ ನಾಯಕನೊಬ್ಬನ ಸಾವು ದು:ಖ ತಂದಿದ್ದು, ಇದರಿಂದ ನನಗೆ ವೈಯಕ್ತಿಕ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಸಾವಿನ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ, ಅಭಿಮಾನಗಳಿಗೂ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಮಧ್ಯಾಹ್ನ ಎರಡು ಗಂಟೆಯ ಸುಮಾರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಮೇಟಿಯವರ ಅಂತ್ಯಕ್ರಿಯೆ ನಡೆಯಲಿದ್ದು, ನಾನು ಸಹ ಪಾಲ್ಗೊಳ್ಳಲಿದ್ದೇನೆ ಎಂದರು.
ಮಾಜಿ ಸಚಿವರು, ಹಿರಿಯ ನಾಯಕರು ಹಾಗೂ ಹಾಲಿ ಶಾಸಕರೂ ಆಗಿದ್ದ ಹೆಚ್.ವೈ.ಮೇಟಿಯವರು ಇಂದು 12.30 ಗೆ ನಿಧನರಾಗಿದ್ದಾರೆ. ನಾನು ಮೂರು ದಿನಗಳ ಹಿಂದೆ ಅವರನ್ನು ಭೇಟಿ ಮಾಡಿ ಅವರ ಆರೋಗ್ಯವನ್ನು ವಿಚಾರಿಸಿದ್ದೆ. ವೈದ್ಯರೂ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ತಿಳಿಸಿದ್ದರು. ಆದರೆ ಮೇಟಿಯವರು ಇಷ್ಟುಬೇಗ ಇಹಲೋಕ ತ್ಯಜಿಸುತ್ತಾರೆಂದು… pic.twitter.com/d2bV5t18eF
— Siddaramaiah (@siddaramaiah) November 4, 2025
