HomeLatest Newsಅಡಕೆ ನಿಷೇಧ ಚರ್ಚೆಗಳಿಂದ ಆತಂಕದಲ್ಲಿದ್ದ ಬೆಳೆಗಾರರಿಗೆ ಗುಡ್ ನ್ಯೂಸ್: ಅಡಕೆಯಲ್ಲಿದೆ ಕ್ಯಾನ್ಸರ್ ಪ್ರತಿಬಂಧಕ ಗುಣ

ಅಡಕೆ ನಿಷೇಧ ಚರ್ಚೆಗಳಿಂದ ಆತಂಕದಲ್ಲಿದ್ದ ಬೆಳೆಗಾರರಿಗೆ ಗುಡ್ ನ್ಯೂಸ್: ಅಡಕೆಯಲ್ಲಿದೆ ಕ್ಯಾನ್ಸರ್ ಪ್ರತಿಬಂಧಕ ಗುಣ

ಮಂಗಳೂರು: ಅಡಕೆಯಲ್ಲಿನ ಸಾರಗಳು ಶಕ್ತಿಶಾಲಿ ಕ್ಯಾನ್ಸರ್ ಪ್ರತಿಬಂಧಕ ಗುಣಗಳನ್ನು ಹೊಂದಿವೆ ಎನ್ನುವುದು ದೃಢಪಟ್ಟಿದೆ. ಈ ಮಹತ್ವದ ಮಾಹಿತಿಯನ್ನು ತಿಳಿಸಿರುವ ಯೆನೆಪೋಯ ವಿಶ್ವವಿದ್ಯಾಲಯದ ಅಡಕೆ ಕುರಿತ ಅಧ್ಯಯನ ವರದಿಯನ್ನು ಕ್ಯಾಂಪ್ಕೋ ಸ್ವಾಗತಿಸಿದೆ.

ಕ್ಯಾಂಪ್ಕೋ ಅಧ್ಯಕ್ಷ ಎ. ಕಿಶೋರ್ ಕುಮಾರ್ ಕೊಡ್ಗಿ, ಅಡಿಕೆಯ ಸಾರಗಳು ಕ್ಯಾನ್ಸರ್ ಕೋಶಗಳ ವೃದ್ಧಿ, ಚಲನೆ ಮತ್ತು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಯುತ್ತವೆ. ಇದು ಸಾಮಾನ್ಯ ಕೋಶಗಳಿಗೆ ಹಾನಿ ಉಂಟು ಮಾಡುವುದಿಲ್ಲ ಎಂಬುದು ಅಧ್ಯಯನದ ಅಂಶಗಳಳಾಗಿವೆ. ಸಾಂಪ್ರದಾಯಿಕವಾಗಿ ಸಂಸ್ಕರಿಸಿದ ಅಡಕೆಯನ್ನು ಬಳಸಿದರೆ ಆರೋಗ್ಯದಾಯಕ ಲಾಭಗಳಿವೆ ಎನ್ನುವ ಜನಸಾಮಾನ್ಯರ ನಂಬಿಕೆಗೆ ವೈಜ್ಞಾನಿಕ ಸಾಕ್ಷ್ಯಾಧಾರ ಒದಗಿಸಿದೆ ಎಂದು ಹೇಳಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ಇತ್ತೀಚೆಗೆ ಅಡಕೆಯನ್ನು ಕ್ಯಾನ್ಸರ್ ಕಾರಕ ಎಂದು ವರ್ಗೀಕರಿಸಿರುವುದು ಕಪೋಲಕಲ್ಪಿತವಾಗಿದೆ. ಕ್ಯಾಂಪ್ಕೋದ ಈ ಪ್ರತಿಪಾದನೆಗೆ ಯೆನೆಪೋಯ ವಿಶ್ವವಿದ್ಯಾಲಯದ ಅಡಕೆ ಕುರಿತ ಅಧ್ಯಯನ ವರದಿ ಪ್ರಬಲವಾದ ಪುರಾವೆಯಾಗಿದೆ. ಈ ರೀತಿಯ ವೈಜ್ಞಾನಿಕ ದೃಢೀಕರಣಗಳಿಂದ ಲಕ್ಷಾಂತರ ಅಡಿಕೆ ಬೆಳೆಗಾರರ ಹಿತಾಸಕ್ತಿ ರಕ್ಷಿಸಲು, ಉತ್ಪನ್ನದ ಕುರಿತಾದ ತಪ್ಪು ಕಲ್ಪನೆಗಳನ್ನು ದೂರವಾಗಿಸಲು ಬಹು ಮುಖ್ಯ ಪಾತ್ರ ವಹಿಸುತ್ತವೆ ಎಂದು ಅವರು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular