ಬೀದರ್ : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕಾರು-ಕೊರಿಯರ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.
ಭಾಲ್ಕಿ ತಾಲೂಕಿನ ನೀಲಮ್ಮನಹಳ್ಳಿ ತಾಂಡಾ ಬಳಿ ಈ ಘಟನೆ ನಡೆದಿದೆ. ಕಾರು ಹಾಗೂ ಡಿಟಿಡಿಸಿ ಕೊರಿಯರ್ ವಾಹನ ಮುಖಾಮುಖಿ ಡಿಕ್ಕಿಯಾಗಿದೆ.
ಪರಿಣಾಮ ಕಾರಿನಲ್ಲಿದ್ದ ಇಬ್ಬರು ಹಾಗೂ ಡಿಟಿಡಿಸಿ ಕೊರಿಯರ್ ವಾಹನದ ಚಾಲಕ ಸೇರಿ ಮೂವರು ಮೃತಪಟ್ಟಿದ್ದಾರೆ. ಈ ಸಂಬಂಧ ಧನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
