ನ. 15ರಿಂದ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 15 ರಿಂದ ಲಕ್ಷ ದೀಪೋತ್ಸವ ನಡೆಯಲಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ವಾರ್ಷಿಕ ಲಕ್ಷ ದೀಪೋತ್ಸವ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ನೇತೃತ್ವದಲ್ಲಿ ನವೆಂಬರ್ 15ರಿಂದ 20ರವರೆಗೆ ನಡೆಯಲಿದೆ. ಲಕ್ಷ ದೀಪೋತ್ಸವ ಅಂಗವಾಗಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ನವೆಂಬರ್ 15ರಂದು ಬೆಳಿಗ್ಗೆ ಧರ್ಮಸ್ಥಳ ಪ್ರೌಢಶಾಲಾ ಮೈದಾನದಲ್ಲಿ ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟಿಸಲಾಗುವುದು. ಸಂಜೆ ಭಕ್ತರಿಂದ ಉಜಿರೆ ಜನಾರ್ದನ ಸ್ವಾಮಿ ಸನ್ನಿಧಿಯಿಂದ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಗೆ ಭಕ್ತಿ ಭಜನೆ ಪಾದಯಾತ್ರೆ ನಡೆಯಲಿದೆ. ಅಂದು ರಾತ್ರಿ ಶ್ರೀ ಮಂಜುನಾಥ ಸ್ವಾಮಿಗೆ ಹೊಸ ಕಟ್ಟೆ ಉತ್ಸವ, ನವೆಂಬರ್ 16ರಂದು ಕೆರೆಕಟ್ಟೆ ಉತ್ಸವ ನಡೆಯಲಿದೆ.

ನವೆಂಬರ್ 17ರಂದು ಲಲಿತೋದ್ಯಾನ ಉತ್ಸವ, ಅಮೃತವರ್ಷಿಣಿ ಸಭಾಭವನದಲ್ಲಿ ಲಲಿತ ಕಲಾಗೋಷ್ಠಿ ನಡೆಯಲಿದೆ. ನವೆಂಬರ್ 18ರಂದು ಕಂಚಿ ಮಾರುಕಟ್ಟೆ ಉತ್ಸವ, ಸರ್ವ ಧರ್ಮ ಸಮ್ಮೇಳನ, ನವೆಂಬರ್ 19ರಂದು ಗೌರಿ ಮಾರುಕಟ್ಟೆ ಉತ್ಸವ ಹಾಗೂ ಸಾಹಿತ್ಯ ಸಮ್ಮೇಳನ, ನವೆಂಬರ್ 20ರಂದು ಶ್ರೀ ಚಂದ್ರನಾಥ ಸ್ವಾಮಿಯ ಸಮ ವಸರಣ ಪೂಜೆಯೊಂದಿಗೆ ಲಕ್ಷ ದೀಪೋತ್ಸವಕ್ಕೆ ತೆರೆ ಬೀಳಲಿದೆ. ಲಕ್ಷ ದೀಪೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read