ಕೋಲಾರ: ಸಚಿವ ಸಂಪುಟ ಪುನಾರಚನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸುಳಿವು ನೀಡಿದ್ದಾರೆ.
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಿಲ್ಲೆಗೆ ಸಚಿವ ಸ್ಥಾನ ದೊರೆಯುವ ಬಗ್ಗೆ ಸಂಪುಟ ಪುನಾರಚನೆ ವೇಳೆ ನೋಡೋಣ ಎಂದರು. ನಾಲ್ಕು ಶಾಸಕರನ್ನು ಹೊಂದಿರುವ ಜಿಲ್ಲೆಗೆ ಸಚಿವ ಸ್ಥಾನದ ಬೇಡಿಕೆ ಬಗ್ಗೆ ಪರಿಶೀಲಿಸಲಾಗುವುದು ಎಂದರು.
ಇದೇ ವೇಳೆ ಎತ್ತಿನಹೊಳೆ ಯೋಜನೆ ಎರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
