HomeLatest NewsBREAKING : ಬೆಳಗಾವಿಯಲ್ಲಿ 7 ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ : ರೈತರ ಜೊತೆ ಕೊರೆಯುವ...

BREAKING : ಬೆಳಗಾವಿಯಲ್ಲಿ 7 ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ : ರೈತರ ಜೊತೆ ಕೊರೆಯುವ ಚಳಿಯಲ್ಲೇ ಮಲಗಿದ ಬಿಜೆಪಿ ನಾಯಕರು.!

ಬೆಳಗಾವಿ : ಬೆಳಗಾವಿಯಲ್ಲಿ ರೈತರ ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದ್ದು, ರೈತರ ಜೊತೆ ಬಿಜೆಪಿ ನಾಯಕರು ಚಳಿಯಲ್ಲೇ ಮಲಗಿ ಹೋರಾಟಕ್ಕೆ ಸಾಥ್ ನೀಡಿದ್ದಾರೆ.

ರೈತರ ಪ್ರತಿಭಟನೆಗೆ ಸಾಥ್ ನೀಡಿರುವ ಬಿಜೆಪಿ ನಾಯಕರು ರಾತ್ರಿಯಿಡೀ ಕೊರೆಯುವ ಚಳಿಯಲ್ಲಿ ಮಲಗಿ ರೈತರಿಗೆ ಸಾಥ್ ನೀಡಿದ್ದಾರೆ. ರಸ್ತೆ ಪಕ್ಕದಲ್ಲಿ ರೈತರಿಗಾಗಿ ಊಟ ತಯಾರಿಸಲಾಗುತ್ತಿದೆ.

ಬೆಳಗಾವಿಯಲ್ಲಿ ಕಬ್ಬಿಗೆ ದರ ನಿಗದಿಗೆ ಆಗ್ರಹಿಸಿ ರೈತರ ಹೋರಾಟ ತೀವ್ರಗೊಂಡಿದೆ. ಗುರ್ಲಾಪುರದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಅಹೋರಾತ್ರಿ ಧರಣಿ 7ನೇ ದಿನಕ್ಕೆ ಕಾಲಿಟ್ಟಿದೆ. ರೈತರ ಹೋರಾಟಕ್ಕೆ ಬಿಜೆಪಿ ಮುಖಂಡರು, ನಾಯಕರು ಕೂಡ ಸಾಥ್ ನೀಡಿದ್ದಾರೆ.ಇಂದು ಹೋರಾಟ ಮತ್ತಷ್ಟು ತೀವ್ರಗೊಳಿಸುವುದಾಗಿ ರೈತರು, ಕಬ್ಬು ಬೆಳೆಗಾರರು ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರಗ್ರಾಮದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಬಾಗಲಕೋಟೆ-ನಿಪ್ಪಾಣಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಟನ್ ಕಬ್ಬಿಗೆ 3500 ರೂಪಾಯಿ ಬೆಂಬಲ ಬೆಲೆ ನಿಗದಿ ಮಾಡುವಂತೆ ರೈತರು ಪಟ್ಟು ಹಿಡ್ದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular