ಬೆಳಗಾವಿ: ಕಬ್ಬು ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಬೆಳಗಾವಿಯಲ್ಲಿ ಕ್ಷಣ ಕ್ಷಣಕ್ಕೂ ತೀವ್ರಸ್ವರೂಪ ಪಡೆದುಕೊಳ್ಳುತ್ತಿದೆ.
ಬೆಳಗಾವಿ ಜಿಲ್ಲೆಯ ಗುರ್ಲಾಪುರದಲ್ಲಿ ರಸ್ತೆ ತಡೆ ನಡೆಸಿರುವ ರೈತರು, ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಬಾರುಕೋಲು ಚಳುವಳಿ ಮೂಲಕ ಸರ್ಕಾರಕ್ಕೆ ಚಾಟಿ ಬೀಸುತ್ತಿದ್ದಾರೆ. ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಬ್ಬಿಗೆ ಇಂದೇ ದರ ನಿಗದಿ ಮಾಡಬೇಕು. ಇಲ್ಲವಾದಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
