ಧಾರವಾಡ: ಲಿಂಗಾಯಿತ ಒಕ್ಕೂಟದ ಸ್ವಾಮೀಜಿಗಳ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ್ದ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ಧಾರವಾಡ ಜಿಲ್ಲಾಡಳಿತ ಮತ್ತೊಂದು ಶಾಕ್ ನೀಡಿದೆ.
ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಬಳಿಕ ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿಯವರಿಗೆ ಧಾರವಾಡ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
ನವೆಂಬರ್ 7ರಂದು ಅಣ್ಣಿಗೇರಿಯ ಕಾರ್ಯಕ್ರಮ ಸಂಬಂಧ ಕನೇರಿ ಶ್ರೀಗಳು ಧಾರವಾಡಕ್ಕೆ ಆಗಮಿಸಬೇಕಿತ್ತು. ಆದರೆ ಅದಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿ ಜಾಗತಿಕ ಲಿಂಗಾಯಿತ ಮಹಾಸಭಾ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರು. ಮನವಿ ಮೇರೆಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳಿಗೆ ಧಾರವಾಡ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.
