ಬಾಗಲಕೋಟೆ: ತೀವ್ರ ಅನಾರೋಗ್ಯದಿಂದ ವಿಧಿವಶರಾಗಿರುವ ಸಹಸಕ ಹೆಚ್.ವೈ.ಮೇಟಿ ಅವರ ಅಂತ್ಯಕ್ರಿಯೆ ಹುಟ್ಟೂರಾದ ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ತಿಮಾಪುರ ಗ್ರಾಮದ ಜಮೀನಿನಲ್ಲಿ ತಂದೆ-ತಾಯಿ ಸಮಾಧಿಕಯ ಪಕ್ಕದಲ್ಲಿಯೇ ಕುರುಬ ಸಮುದಾಯದ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಪೊಲೀಸರು ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವ ಸಲ್ಲಿಸಿದ್ದು, ಸಿಎಂ ಸಿದ್ದರಾಮಯ್ಯ ಹೆಚ್.ವೈ.ಮೇಟಿ ಪುತ್ರರಿಗೆ ರಾಷ್ಟ್ರಧ್ವಜ ಹಸ್ತಾಂತರಿಸಿದರು. ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಅಂತ್ಯಕ್ರಿಯೆಯಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವರಾದ ಬೈರತಿ ಸುರೇಶ್, ಹೆಚ್.ಸಿ.ಮಹದೇವಪ್ಪ, ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಹಾಗೂ ಅಪಾರ ಸಂಖ್ಯೆಯ ಗ್ರಾಮಸ್ಥರು ಭಾಗವಹಿಸಿದ್ದರು.
