ಬೆಂಗಳೂರು: ಮಂಡ್ಯದ ಡಿಸಿ ಕಚೇರಿ ಬಳಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ರೈತನ ಕುಟುಂಬಕ್ಕೆ ರಾಜ್ಯ ಸರ್ಕಾರ ೫ ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
ಕೃಷಿ ಸಚಿವ ಚಲುವರಾಯಸ್ವಾಮಿ, ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಮೃತ ರೈತ ಮಂಜೇಗೌಡ ಅವರ ಅಂತಿಮ ದರ್ಶನ ಪಡೆದರು. ಬಳಿಕ ಕುಟೂಂಬದವರಿಗೆ ಸಾಂತ್ವನ ಹೇಳಿದರು.
ಈ ವೇಳೆ ಮಾತನಾಡಿದ ಸಚಿವರು, ಮೃತ ರೈತನ ಕುಟುಂಬಕ್ಕೆ ೫ ಲಕ್ಷ ಪರಿಹಾರ ನೀಡಲಾಗುವುದು ಎಂದರು. ಮಂಜೇಗೌಡ ಅವರ ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಜಂಟಿ ಸರ್ವೆ ನಡೆಸಲಾಗುವುದು. ಜಾಗವೇನಾದರೂ ಅರಣ್ಯ ಇಲಾಖೆ ಒಡೆತನಕ್ಕೆ ಸೇರಿದ್ದರೆ ಆಜಾಗವನ್ನು ಕುಟುಂಬದವರಿಗೆ ನೀಡುವುದಾಗಿ ತಿಳಿಸಿದರು.
