ಬೆಂಗಳೂರು: ಕಿರ್ಲೋಸ್ಕರ್ ಫೆರೋಸ್ ಇಂಡಸ್ಟ್ರೀಸ್ ರಾಜ್ಯದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ₹3,000 ಕೋಟಿ ಹೂಡಿಕೆ ಮಾಡಲಿದೆ.
ಜೊತೆಗೆ ವಿಪ್ರೊ ಪ್ಯಾರಿ, ಅಟ್ಲಾಸ್ ಕಾಪ್ಕೋ, ಬೆಲ್‌ರೈಸ್ ಇಂಡಸ್ಟ್ರೀಸ್, ಫಿನೋಲೆಕ್ಸ್ ಹಾಗೂ ಫ್ಲೂಯಿಡ್ ಕಂಟ್ರೋಲ್ಸ್ ಲಿಮಿಟೆಡ್ ಉದ್ಯಮಗಳು ಕೂಡ ಹೂಡಿಕೆಗೆ ಆಸಕ್ತಿ ತೋರಿಸಿವೆ ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ಹಿರಿಯೂರು ಸ್ಥಾವರ ಅಭಿವೃದ್ಧಿಗೆ ರೂ. 3,000 ಕೋಟಿ ಹೂಡಿಕೆ ಪ್ರಕಟಿಸಿದ ಕಿರ್ಲೋಸ್ಕರ್ ಫೆರಸ್!
ಶೇ. 99 ಕನ್ನಡಿಗರಿಗೆ ಉದ್ಯೋಗ ಮೀಸಲು!
ಹೂಡಿಕೆ ಆಕರ್ಷಣೆ, ಉದ್ಯಮ ವಿಸ್ತರಣೆಯ ಗುರಿ ಇರಿಸಿಕೊಂಡು ಕೈಗಾರಿಕಾ ಇಲಾಖೆಯ ಉನ್ನತಮಟ್ಟದ ನಿಯೋಗದೊಂದಿಗೆ ಈ ದಿನ ಪುಣೆಯಲ್ಲಿ ರೋಡ್ ಶೋ ಹಮ್ಮಿಕೊಳ್ಳಲಾಗಿದೆ.
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರಿಸ್ ಪ್ರಮುಖರೊಂದಿಗೆ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಸಂಸ್ಥೆಯು ಮುಂದಿನ 3 ವರ್ಷಗಳಲ್ಲಿ ಉಕ್ಕು ತಯಾರಿಕೆಯನ್ನು ವಿಸ್ತರಿಸಲು, ಕಬ್ಬಿಣದ ಅದಿರು ಸಂಸ್ಕರಣೆಯನ್ನು ಹೆಚ್ಚಿಸಲು ಮತ್ತು ಸ್ಪಾಂಜ್ ಪೈಪ್ ಉತ್ಪಾದನೆಗಾಗಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸ್ಥಾವರವನ್ನು ಅಭಿವೃದ್ಧಿಪಡಿಸಲು ₹3,000 ಕೋಟಿ ಹೂಡಿಕೆ ಮಾಡಲಿದೆ. ತನ್ನ ಸಂಸ್ಥೆಯಲ್ಲಿ ಶೇ. 99 ರಷ್ಟು ಕನ್ನಡಿಗರಿಗೆ ಮೀಸಲಿಡುವುದಾಗಿ ತಿಳಿಸಿದ್ದು ಸಂತಸ ತರಿಸಿದೆ.
ಕಳೆದ ಎರಡು ದಶಕಗಳಿಂದ ಸಂಸ್ಥೆ ತನ್ನ ಲಾಭದ ಶೇ. 2ರಷ್ಟು ಅಂಶವನ್ನು ಸಿಎಸ್ಆರ್ ಚಟುವಟಿಕೆಗಳಿಗೆ ಮೀಸಲಿಟ್ಟಿದ್ದು, ಮುಂದಿನ ದಿನಗಳಲ್ಲಿ ಗ್ರಾಮೀಣ ಆರೋಗ್ಯ ಮತ್ತು ಜನಕಲ್ಯಾಣದ ಕ್ಷೇತ್ರದಲ್ಲಿ ಹೆಚ್ಚಿನ ಒತ್ತು ನೀಡಲಿರುವುದು ಶ್ಲಾಘನೀಯ ಎಂದು ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
