ಬೆಂಗಳೂರು: ಮುಜರಾಯಿ ಇಲಾಖೆ ಆಯುಕ್ತ ಎಂ.ವಿ. ವೆಂಕಟೇಶ್ ಅವರನ್ನು ಅಮಾನತು ಮಾಡಲಾಗಿದೆ. ರಾಜ್ಯ ಸರ್ಕಾರ ಎಂ.ವಿ. ವೆಂಕಟೇಶ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಬಿಹಾರ ಚುನಾವಣೆ ಕರ್ತವ್ಯಕ್ಕೆ ಗೌರವ ಹಾಜರಾದ ಹಿನ್ನೆಲೆಯಲ್ಲಿ ಎಂ.ವಿ. ವೆಂಕಟೇಶ್ ಅವರನ್ನು ಅಮಾನತು ಮಾಡಲಾಗಿದೆ. ಬಿಹಾರ ರಾಜ್ಯದ ಕೈಮೂರ್ ವಿಧಾನಸಭಾ ಕ್ಷೇತ್ರದ ವೀಕ್ಷಕರಾಗಿ ಅವರನ್ನು ಸರ್ಕಾರ ನೇಮಕ ಮಾಡಿದ್ದು, ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಕರ್ತವ್ಯಕ್ಕೆ ಗೈರು ಹಾಜರಾಗಿದ್ದರು.
ಕರ್ತವ್ಯಕ್ಕೆ ಹಾಜರಾಗಿರುವುದಾಗಿ ಸುಳ್ಳು ಮಾಹಿತಿ ನೀಡಿದ್ದರು. ಕಾರಣ ಕೇಳಿ ರಾಜ್ಯ ಸರ್ಕಾರ ಅವರಿಗೆ ನೋಟಿಸ್ ನೀಡಿತ್ತು. ಕರ್ತವ್ಯ ಲೋಪ ಕಂಡು ಬಂದ ಹಿನ್ನೆಲೆಯಲ್ಲಿ ಎಂ.ವಿ. ವೆಂಕಟೇಶ್ ಅವರನ್ನು ಅಮಾನತು ಮಾಡಲಾಗಿದೆ. ಜೊತೆಗೆ ಮುಜರಾಯಿ ಇಲಾಖೆಯಿಂದ ತನಿಖೆಗೆ ಸರ್ಕಾರ ಆದೇಶಿಸಿದೆ.
