ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ ಟೆಂಡರ್ ನಲ್ಲಿ ಆಕ್ರಮ ನಡೆದಿರುವ ಆರೋಪದ ಬಗ್ಗೆ ವಿಚಾರಣೆ ನಡೆಸಿ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ವಿಶೇಷ ನ್ಯಾಯಾಲಯ ಹೊರಡಿಸಿದ ಆದೇಶ ಪ್ರಶ್ನಿಸಿ ಇಂಧನ ಸಚಿವ ಕೆ.ಜೆ. ಚಾರ್ಜ್ ಹಾಗೂ ಇತರರು ಸಲ್ಲಿಸಿದ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಕೆ.ಜೆ. ಜಾರ್ಜ್, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ, ತಾಂತ್ರಿಕ ವಿಭಾಗದ ನಿರ್ದೇಶಕ ಹೆಚ್.ಜಿ. ರಮೇಶ್ ಅವರು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ಐ. ಅರುಣ್ ಅವರ ಪೀಠ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದೆ.
ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆ ಸಂಬಂಧದ ಟೆಂಡರ್ ಕಾನೂನುಬಾಹಿರ. ಟೆಂಡರ್ ನೀಡಿಕೆಯಿಂದ 16,000 ಕೋಟಿ ರೂಪಾಯಿ ದುರ್ಲಾಭ ಪಡೆಯಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಶಾಸಕರಾದ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ್, ಎಸ್.ಆರ್. ವಿಶ್ವನಾಥ್ ಮತ್ತು ಧೀರಜ್ ಮುನಿರಾಜ್ ಅವರು ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.
