ಬೆಂಗಳೂರು: ಆಂಧ್ರಪ್ರದೇಶ, ತಮಿಳುನಾಡು ಕರಾವಳಿ ತೀರದಲ್ಲಿ ಮೇಲ್ಮೈ ಸುಳಿಗಾಳಿ, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ನವೆಂಬರ್ 9 ರವರೆಗೆ ಮೋಡ ಕವಿದ ವಾತಾವರಣ ಇರುತ್ತದೆ.
ಉತ್ತರ ಕರ್ನಾಟಕದ ಕೆಲವು ಭಾಗದಲ್ಲಿ ಬುಧವಾರ ಮಳೆಯಾಗಿದೆ. ಇನ್ನುಳಿದಂತೆ ನವೆಂಬರ್ 6ರಿಂದ 8ರವರೆಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಚಾಮರಾಜನಗರ, ಮೈಸೂರು, ಮಂಡ್ಯ, ಶಿವಮೊಗ್ಗ, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ.
ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇರುತ್ತದೆ. ಬೆಂಗಳೂರು ನಗರದಲ್ಲಿ ಎರಡು ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಮೋಡ ಕವಿದ ವಾತಾವರಣದಿಂದ ಚಳಿ ಹೆಚ್ಚಾಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಕುಸಿತವಾಗಿದೆ.
