ಝಾನ್ಸಿ: ಕ್ರಿಕೆಟ್ ಆಡುತ್ತಿದ್ದಾಗಲೇ ಹಠಾತ್ ಹೃದಾಯಾಘಾತ ಸಂಭವಿಸಿ ಅಧಿಕಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಉತ್ತರ ಪ್ರದೇಶದ ಝಾನ್ಸಿಯಲ್ಲಿ ಎಲ್ ಐಸಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 30 ವರ್ಷದ ಅಧಿಕಾರಿ ರವೀಂದ್ರ ಅಹಿರ್ವಾರ್ ಕ್ರಿಕೆಟ್ ಆಡುತ್ತಿದ್ದಾಗಲೇ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸಿಪ್ರಿ ಬಜಾರ್ ಪ್ರದೇಶದ ನಲ್ಲಂಜ್ ನಿವಾಸಿ ಎಂದು ಗುರುತಿಸಲಾಗಿದೆ.
ಕುಸಿದು ಬಿದ್ದ ಅಧಿಕಾರಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿಯೇ ಅವರು ಸಾವನ್ನಪ್ಪಿದ್ದರು ಎಂದು ವೈದ್ಯರು ಘೋಷಿಸಿದ್ದಾರೆ. ಆರೋಗ್ಯವಾಗಿಯೇ ಇದ್ದ ಅಧಿಕಾರಿ ಏಕಾಏಕಿ ಸಾವನ್ನಪ್ಪಿದ್ದಾರೆ.
