ವಿಜಯನಗರ: ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ ಅವರ ಮನೆಯಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಜೇಲು (26) ಹಾಗೂ ರಾಕೇಶ್ ಪವಾರ್ (23) ಬಂಧಿತ ಆರೋಪಿಗಳು. ಜುಲೈ 17ರಂದು ಹರಪನಹಳ್ಳಿಯ ಕಾಶಿ ಸಂಗಮೇಶ್ವರ ಬಡಾವಣೆಯಲ್ಲಿರುವ ಶಾಸಕಿ ಲತಾ ಮಲ್ಲಿಕಾರ್ಜುನ ಅವರ ಮನೆಯ ಬಾಗಿಲು ಮುರಿದು ಕಳ್ಳರು ಕಳ್ಳತನ ಮಾಡಿದ್ದರು.
ಇದೀಗ ಹರಪನಹಳ್ಳಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ 11.65 ಲಕ್ಷ ಹಣ, ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
