BIG NEWS: ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ : ಶೀಘ್ರವೇ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ

ಬೆಂಗಳೂರು : 2011-12ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸಮಸ್ಯೆ ಬಗ್ಗೆ ಶೀಘ್ರವೇ ನಿಯೋಗದೊಂದಿಗೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲಾಗುವುದು ಎಂದರು.

ಇಲಾಖೆಯಲ್ಲಿ ಕೆಲ ಅಧಿಕಾರಿಗಳ ಅಚಾತುರ್ಯದಿಂದ 2011ನೇ ಸಾಲಿನ ಬದಲಾಗಿ 2023ನೇ ಸಾಲಿನಿಂದ ಗ್ರ್ಯಾಚುಟಿ ಜಾರಿಗೆ ಬಂದಿದೆ.‌ ಈ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಲಾಗುವುದು. ಈಗಾಗಲೇ 3-4 ಬಾರಿ ಹಣಕಾಸು ಇಲಾಖೆಯವರ ಜೊತೆ ಮಾತುಕತೆ ನಡೆಸಲಾಗಿದೆ. ಮುಖ್ಯಮಂತ್ರಿ ಅವರ ಜೊತೆ ಮಾತುಕತೆ ನಡೆಸಿ ಈ ಸಮಸ್ಯೆಯನ್ನು ಬಗೆ ಹರಿಸಲಾಗುವುದು ಎಂದು ಭರವಸೆ ನೀಡಿದರು.

ಇದೇ ವೇಳೆ ಕರ್ನಾಟಕದಲ್ಲಿ ಅಂಗನವಾಡಿ ಆರಂಭವಾಗಿ 50 ವರ್ಷಗಳಾಗಿದ್ದು, ನವೆಂಬರ್ 19 ರಂದು ಬೆಂಗಳೂರಿನಲ್ಲಿ ಅದ್ದೂರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಎಲ್ಲರೂ ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read