ಬೆಳಗಾವಿ: ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ ಬಳಿ ಕಬ್ಬು ಬೆಳೆಗಾರರ ಪ್ರತಿಭಟನೆ ಮುಂದುವರೆದಿದೆ. ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರ ಕಾರ್ ಮೇಲೆ ಚಪ್ಪಲಿ, ನೀರಿನ ಬಾಟಲ್ ಎಸೆದು ಆಕ್ರೋಶ ವ್ಯಕ್ತಪಡಿಸಲಾಗಿದೆ.
ಟನ್ ಕಬ್ಬಿಗೆ 3500 ರೂ. ನೀಡಬೇಕೆಂದು ಆಗ್ರಹಿಸಿ ರೈತರ ಪ್ರತಿಭಟನೆ ಮುಂದುವರೆದಿದ್ದು, ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಚಿವ ಶಿವಾನಂದ ಪಾಟೀಲ್ ರೈತರ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ. ಎರಡು ದಿನ ಸಮಯಾವಕಾಶ ಕೊಡಿ ಎಂದು ಹೇಳಿದ್ದಾರೆ. ಈ ವೇಳೆ ನಾಳೆ 7 ಗಂಟೆಯೊಳಗೆ ರೈತರ ಬೇಡಿಕೆಗಳನ್ನು ಈಡೇರಿಸಬೇಕು. ನಂತರ ನಾವು ಪ್ರತಿಭಟನೆಯನ್ನು ಹಿಂಪಡೆಯುತ್ತೇವೆ. ಅಲ್ಲಿಯವರೆಗೂ ಹೋರಾಟ ಮುಂದುವರೆಸುತ್ತೇವೆ. ಹೆದ್ದಾರಿ ತಡೆಯುವುದನ್ನು ಕೂಡ ಮುಂದೂಡುತ್ತೇವೆ ಎಂದು ಹೇಳಿದ್ದಾರೆ.
ಸಚಿವರು ಯಾವುದೇ ಭರವಸೆ ನೀಡದೆ ತೆರಳಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು ಸಚಿವರ ಕಾರ್ ಗೆ ಮುತ್ತಿಗೆ ಹಾಕಲು ಮುಂದಾಗಿದ್ದರೆ. ಬಿಗಿ ಭದ್ರತೆಯಲ್ಲಿ ಅವರನ್ನು ಕರೆದೊಯ್ಯಲಾಗಿದೆ. ರೈತರ ಜೊತೆಗೆ ಮಾತುಕತೆಗೆ ಹೋಗಿದ್ದ ಸಚಿವರು ಯಾವುದೇ ಭರವಸೆ ನೀಡದ್ದರಿಂದ ಆಕ್ರೋಶ ಭರಿತರಾಗಿದ್ದ ರೈತರು ಕಾರ್ ಮೇಲೆ ಚಪ್ಪಲಿ, ನೀರಿನ ಬಾಟಲ್ ಎಸೆದಿದ್ದಾರೆ.
