ಶಿವಮೊಗ್ಗ: ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ವರ್ ದಿಢೀರ್ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಪುತ್ರನಿಗೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದ್ದಾರೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೂಡ್ಲಿಗೆರೆಯಲ್ಲಿ ನಡೆದ ಗ್ಯಾರಂಟಿ ಫಲಾನುಭವಿಗಳ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಸಂಗಮೇಶ್ವರ್, ಇದೇ ನನ್ನ ಕೊನೆಯ ಚುನಾವಣೆ. ಇಷ್ಟು ವರ್ಷ ನೀವು ನನ್ನನ್ನು ಸಹೋದರ ಎಂದು ತಿಳಿದು ಆಶೀರ್ವಾದ ಮಾಡಿದಂತೆ ಮುಂದಿನ ಚುನಾವಣೆಯಲ್ಲಿ ನನ್ನ ಮಗ ಗಣೇಶ್ ಅವರಿಗೆ ಬೆಂಬಲ ನೀಡಿ ಆಶೀರ್ವಾದ ಮಾಡಿ ಎಂದು ಹೇಳಿದ್ದಾರೆ.
ಭದ್ರಾವತಿ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷರಾಗಿ ಗಣೇಶ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಂಗಮೇಶ್ ಅವರು ನಾಲ್ಕು ಬಾರಿ ಶಾಸಕರಾಗಿದ್ದು, ಈ ಬಾರಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿರುವ ಸಂಗಮೇಶ್ವರ್ ಅವರು ಪುತ್ರನನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.
