GOOD NEWS : ರಾಜ್ಯದಲ್ಲಿ ‘ಗೃಹಲಕ್ಷ್ಮಿ’ ಯರಿಗಾಗಿ ‘ಸಹಕಾರ ಸಂಘ’ ಆರಂಭ, ಸಿಗಲಿದೆ 3 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ.!

ಬೆಂಗಳೂರು : ಗೃಹಲಕ್ಷ್ಮಿ ಫಲಾನುಭವಿಗಳಿಗೆ ಲಾಭ ತಂದುಕೊಡಲು ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರಿ ಸಂಘವನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಲಾಭ ತಂದುಕೊಡಲು ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರಿ ಸಂಘವನ್ನು ಆರಂಭಿಸಲಾಗುವುದು ಈ ಮೂಲಕ ಮೂರು ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಫಲಾನುಭವಿಗಳಿಗೆ ಸಾಲ ನೀಡಲಾಗುವುದು. ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟಕ್ಕೂ ಗೃಹಲಕ್ಷ್ಮಿ ಸೊಸೈಟಿಯನ್ನು ವಿಸ್ತರಣೆ ಮಾಡಲಾಗುವುದು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಹೆಚ್ಚಿನ ಮಟ್ಟದಲ್ಲಿ ಉದ್ಯಮ ನಡೆಸಲು ಸಾಲ ಸೌಲಭ್ಯ ಕಲ್ಪಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ಗೃಹಲಕ್ಷ್ಮಿ ಸಹಕಾರ ಸಂಘಗಳನ್ನು ಸ್ಥಾಪಿಸಲಿದೆ .ಗೃಹಲಕ್ಷ್ಮಿಯರ ಸ್ವಯಂ ಉದ್ಯಮದ ಕನಸಿಗೆ ಕಾಂಗ್ರೆಸ್ ಸರ್ಕಾರದ ಆರ್ಥಿಕ ಚೈತನ್ಯ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳನ್ನು ಸ್ವಯಂ ಉದ್ಯಮಿಗಳನ್ನಾಗಿ ಮಾಡಿ ಸ್ವಾವಲಂಬನೆ ಸಾಧಿಸುವಂತೆ ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಸಹಕಾರ ಸಂಘ ಸ್ಥಾಪನೆಯ ಮಹತ್ವದ ಹೆಜ್ಜೆ ಇಟ್ಟಿದೆ. ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದ 1.24 ಕೋಟಿ ಮಹಿಳೆಯರು ಪ್ರತಿ ತಿಂಗಳು ₹2,000 ಪಡೆಯುತ್ತಿದ್ದು, ಸಾಕಷ್ಟು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ಸ್ವಂತ ಉದ್ಯಮ ಆರಂಭಿಸುವ ಮೂಲಕ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಅವರಿಗೆ ಹೆಚ್ಚಿನ ಮಟ್ಟದಲ್ಲಿ ಉದ್ಯಮ ನಡೆಸಲು ಸಾಲ ಸೌಲಭ್ಯ ಕಲ್ಪಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ಗೃಹಲಕ್ಷ್ಮಿ ಸಹಕಾರ ಸಂಘಗಳನ್ನು ಸ್ಥಾಪಿಸಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read