ಬೆಂಗಳೂರು: ನೆಲಮಂಗಲ ರಸ್ತೆಯಲ್ಲಿ ಆರ್.ಟಿ.ಒ. ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 35ಕ್ಕೂ ಹೆಚ್ಚು ಖಾಸಗಿ ಬಸ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ತೆರಿಗೆ, ಸಾರಿಗೆ ನಿಯಮಗಳನ್ನು ಮೀರಿ ಓಡಾಡುತ್ತಿದ್ದ ಖಾಸಗಿ ಬಸ್ ಗಳನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರು -ತುಮಕೂರು ರಸ್ತೆಯಲ್ಲಿ ಆರ್.ಟಿ.ಒ. ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಬೇರೆ ಬೇರೆ ಊರುಗಳಿಗೆ ತೆರಳುತ್ತಿದ್ದ ಖಾಸಗಿ ಬಸ್ ಗಳನ್ನು ಸೀಜ್ ಮಾಡಿದ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಆರ್.ಟಿ.ಒ. ಅಧಿಕಾರಿಗಳು ಬದಲಿ ವ್ಯವಸ್ಥೆ ಮಾಡಿದ್ದಾರೆ. ಕೆಲವು ಪ್ರಯಾಣಿಕರು ಮೆಟ್ರೋ ಮೂಲಕ ಬಸ್ ನಿಲ್ದಾಣಕ್ಕೆ ಹಿಂತಿರುಗಿದ್ದಾರೆ.
