ನವದೆಹಲಿ: ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದ್ದು, ಪ್ರಯಾಣಿಕರು ಪರದಡುವಂತಾಗಿದೆ.
ಏರ್ ಟ್ರಾಫಿಕ್ ಕಂಟ್ರೋಲ್ ನಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ 100 ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ. ಇದರಿಂದಾಗಿ ಪ್ರಯಾಣಿಕರು ತೊಂದರೆಗೆ ಸಿಲುಕಿದ್ದಾರೆ. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಫ್ಲೈಟ್ ಗಾಗಿ ಕಾಯುತ್ತಿರುವ ಸ್ಥಿತಿ ನಿರ್ಮಾಣವಾಗಿದೆ.
ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡ ಬೇಕಿದ್ದ ಪ್ರಯಾಣಿಕರು ಪರದಾಡುವಂತಾಗಿದೆ.
