ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಬೆಂಗಳೂರಿಗೂ ವ್ಯಾಪಿಸಿದೆ. ಟನ್ ಕಬ್ಬಿಗೆ 3500 ರೂ ನಿಗದಿ ಮಾಡುವಂತೆ ಒತ್ತಾಯಿಸಿ ರತರು ನಡೆಸುತ್ತಿರುವ ಪ್ರತಿಭಟನೆ ಕ್ಷಣ ಕ್ಷಣಕ್ಕೂ ಉಗ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ನಡುವೆ ರೈತರ ಹೋರಾಟಕ್ಕೆ ಎಚ್ಚೆತ್ತ ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಿದೆ.
ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಕ್ಕೆ ಕಾರ್ಖಾನೆ ಮಾಲೀಕರ ಸಭೆ ಆರಂಭವಾಗಿದೆ. ರಾಜ್ಯದ 70ಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆ ಮಾಲೀಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ಸಭೆಯಲ್ಲಿ ಕಬ್ಬು ಬೆಳೆಗಾರರ ಸಂಕಷ್ಟ, ಬೇಡಿಗಳ ಬಗ್ಗೆ ಸಮಾಲೋಚನೆ ನಡೆಯಲಿದೆ. ಸಭೆಯಲ್ಲಿ ರೈತರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಯಾವೆಲ್ಲ ನಿರ್ಧಾರ ಕೈಗೊಳ್ಳಲಾಗುವುದು ಎಂಬುದು ತೀವ್ರ ಕುತೂಹಲ ಮೂಡಿಸಿದೆ.
