ಧಾರವಾಡ : ಕರ್ನಾಟಕ ಮಾಧ್ಯಮ ಅಕಾಡೆಮಿಯು ಪ್ರತಿ ವರ್ಷ ಹಿರಿಯ ಪತ್ರಕರ್ತರ ಸೇವೆಯನ್ನು ಗುರುತಿಸಿ, ಅವರಿಗೆ ಗೌರವ ಪ್ರಶಸ್ತಿಗಳನ್ನು ನೀಡುತ್ತದೆ. 2025 ನೇ ಸಾಲಿನ ಹಿರಿಯ ಪತ್ರಕರ್ತರ ಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪತ್ರಿಕೋದ್ಯಮ ಕ್ಷೇತ್ರದಲ್ಲಿ 20 ವರ್ಷಗಳ ಸೇವೆ ಸಲ್ಲಿಸಿರುವ 50 ವರ್ಷ ಮೇಲ್ಪಟ್ಟರುವ ಪತ್ರಕರ್ತರ ಹೆಸರು, ವಯಸ್ಸು, ವಿಳಾಸ, ದೂರವಾಣಿ ಸಂಖ್ಯೆಯೊಂದಿಗೆ ಅವರ ಸಾಧನೆಯ ಕಿರು ಪರಿಚಯವನ್ನು ಧಾರವಾಡ ವಾರ್ತಾ ಇಲಾಖೆಗೆ ಸಲ್ಲಿಸಬೇಕು. ಯಾವುದೇ ಕ್ರಿಮಿನಲ್ ಪ್ರಕರಣದ ಮೊಕದ್ದಮೆ ಇರಬಾರದು.
