HomeLive NewsBREAKING: ಹತ್ತರಗಿಯಲ್ಲಿ ಪರಿಸ್ಥಿತಿ ಉದ್ವಿಗ್ನ: ರೈತರ ಪ್ರತಿಭಟನೆ ವೇಳೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

BREAKING: ಹತ್ತರಗಿಯಲ್ಲಿ ಪರಿಸ್ಥಿತಿ ಉದ್ವಿಗ್ನ: ರೈತರ ಪ್ರತಿಭಟನೆ ವೇಳೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

ಬೆಳಗಾವಿ: ಟನ್ ಕಬ್ಬಿಗೆ 3500 ರೂಪಾಯಿ ನಿಗದಿ ಮಾಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಹತ್ತರಗಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

ಬೆಳಗಾವಿ ಜಿಲ್ಲೆಯ ಹತ್ತರಗಿ ಕ್ರಾಸ್ ನಲ್ಲಿ ಕಬ್ಬು ಬೆಳೆಗಾರರು ಪ್ರತಿಭಟನೆ ತೀವ್ರಗೊಳಿಸಿದ್ದರು. ಈ ವೇಳೆ ಪುಣೆ-ಬೆಂಗಳೂರು ರಾಷ್ಟ್ರಿಯ ಹೆದ್ದಾರಿ ಬಂದ್ ಮಾಡಿ ಹೋರಾಟ ನಡೆಸಿದ್ದರು. ಇದರಿಂದಾಗಿ ಬಸ್ ಗಳು ಹಾಗೂ ವಾಹನ ಸಂಚಾರ ಏಕಾಏಕಿ ಸ್ಥಗಿತಗೊಂಡಿದ್ದು, ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಸಂಭವಿಸಿದೆ. ಇದರಿಂದಾಗಿ ಪೊಲೀಸರು ಪ್ರತಿಭಟನಾ ನಿರತ ರೈತರಿಗೆ ಹೆದ್ದಾರಿ ಬಂದ್ ಮಾಡದಂತೆ ಮನವೊಲಿಸಲು ಯತ್ನಿಸಿದ್ದಾರೆ. ಆದರೆ ರೈತರು ರಸ್ತೆ ತಡೆ ನಿಲ್ಲಿಸಿಲ್ಲ. ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಟ್ರ್ಯಾಕ್ಟರ್ ಗಳನ್ನು ಅಡ್ಡ ಇಟ್ಟು ಪ್ರತಿಭಟನೆ ಮುಂದುವರೆಸಿದ್ದರು. ಈ ವೇಳೆ ಪೊಲೀಸರು ರೈತ ಮುಖಂಡರನ್ನು ನೂರಾರು ರೈತರನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸರು ರೈತರನ್ನು ವಶಕ್ಕೆ ಪಡೆಯುತ್ತಿದ್ದಂತೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರು, ರೈತರು, ಸಿಕ್ಕ ಸಿಕ್ಕ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಟ್ಟಿದ್ದಾರೆ. ಕಲ್ಲು ತೂರಾಟದಿಂದಾಗಿ ಪೊಲೀಸರು, ಹೋರಾಟಗಾರರು ಕೂಡ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular