BREAKING: ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ: 3,300 ರೂಪಾಯಿ ನೀಡಲು ನಿರ್ಧಾರ

ಬೆಂಗಳೂರು: ಕಬ್ಬು ಬೆಳೆಗಾರರು ನಡೆಸುತ್ತಿದ್ದ ಹೋರಾಟಕ್ಕೆ ಕೊನೆಗೂ ರಾಜ್ಯ ಸರ್ಕಾರ ಮಣಿದಿದೆ. ಪ್ರತಿ ಟನ್ ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಲು ಸರ್ಕಾರ ನಿರ್ಧರಿಸಿದೆ.

ಕಬ್ಬು ಬೆಳೆಗಾರರು ಪ್ರತಿ ಟನ್ ಕಬ್ಬಿಗೆ 3500 ರೂಪಾಯಿ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಬೆಳಗಾವಿಯಲ್ಲಿ ನಡೆಯುತ್ತಿದ್ದ ರೈತರ ಹೋರಾಟ ಹಿಂಸಾಚಾರಕ್ಕೆ ತಿರುಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಬ್ಬು ಬೆಳೆಗಾರರ ಮುಖಂಡರ ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯಲ್ಲಿ ಸರ್ಕಾರ ಪ್ರತಿ ಟನ್ ಕಬ್ಬಿಗೆ 3300 ರೂಪಾಯಿ ದರ ನಿಗದಿ ಮಾಡಲು ನಿರ್ಧರಿಸಿದೆ. ಸರ್ಕಾರದಿಂದ 50 ರೂಪಾಯಿ ಹಾಗೂ ಕಾರ್ಖಾನೆಯಿಂದ 50 ರೂಪಾಯಿ ನೀಡಲಾಗುವುದು. ಈ ಮೂಲಕ ಒಟ್ಟು 3300 ರೂಪಾಯಿ ನೀಡಲು ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read