ಬೆಳಗಾವಿ: ಬೆಳಗಾವಿಯ ಹತ್ತರಗಿಯಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡ ಘಟನೆ ನಡೆದಿದೆ. ಕಲ್ಲು ತೂರಾಟದಲ್ಲಿ 6 ಪೊಲೀಸರು ಗಾಯಗೊಂಡಿದ್ದಾರೆ.
ಕಬ್ಬು ಬೆಳೆಗಾರರು ಹತ್ತರಗಿಯಲ್ಲಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ, ಕಲ್ಲು ತೂರಾಟ ನಡೆಸಿದ್ದರಿಂದ ನೂಕಾಟ-ತಳ್ಳಾಟ ನಡೆದಿದೆ. ಘಟನೆಯಲ್ಲಿ 6 ಪೊಲೀಸರು ಗಾಯಗೊಂಡಿದ್ದಾರೆ.
ಕಲ್ಲು ತೂರಾಟದಿಂದ 6 ಪೊಲೀಸರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲ್ಲು ತೂರಾಟದ ವೇಳೆ ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಪೊಲೀಸರು ಯಾವುದೇ ಬಲ ಪ್ರಯೋಗ ಮಾಡಿಲ್ಲ. ನಮ್ಮ ಮನವಿ ಮೇರೆಗೆ ಹೋರಾಟಗಾರರು ಪ್ರತಿಭಟನೆ ಹಿಂಪಡೆದಿದ್ದಾರೆ. ಸದ್ಯ ರಾಷ್ಟ್ರೀಯ ಹೆದ್ದಾರಿಯಲ್ಲಿಯೂ ಸುಗಮ ಸಂಚಾರ ಆರಂಭವಾಗಿದೆ ಎಂದು ಬೆಳಗಾವಿ ಎಸ್ ಪಿ ಭೀಮಾಶಂಕರ್ ಗುಳೇದ್ ತಿಳಿಸಿದ್ದಾರೆ.
