ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಸಿನಿಮಾ ಟೀಸರ್ ಬಿಡುಗಡೆಯಾಗಿದೆ. ಮಾರ್ಕ್ ಹತ್ಯೆಗೆ ಡೀಲ್ ಕೊಡುವ ದೃಶ್ಯದೊಂದಿಗೆ ಟೀಸರ್ ಆರಂಭವಾಗುತ್ತದೆ.
ಕಿಚ್ಚ ಸುದೀಪ್ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳನ್ನು ಹುಚ್ಚೆಬ್ಬಿಸುವಂತಿದೆ. ಶುಕ್ರವಾರ ಸಂಜೆ ಬಿಡುಗಡೆಯಾದ ಗಂಟೆಗಳಲ್ಲಿ ಲಕ್ಷಾಂತರ ಮಂದಿ ‘ಮಾರ್ಕ್’ ಟೀಸರ್ ವೀಕ್ಷಣೆ ಮಾಡಿದ್ದಾರೆ. ಟೀಸರ್ ನೋಡಿದ ಸುದೀಪ್ ಅಭಿಮಾನಿಗಳ ಸಂಭ್ರಮವಂತೂ ಹೇಳತೀರದಾಗಿದೆ. ಬಹು ನಿರೀಕ್ಷಿತ ‘ಮಾರ್ಕ್’ ಸಿನಿಮಾ ಡಿಸೆಂಬರ್ 25ಕ್ಕೆ ಬಿಡುಗಡೆಯಾಗಲಿದೆ. ಸಿನಿಮಾ ಬಿಡುಗಡೆ ದಿನಾಂಕ ಈಗಾಗಲೇ ಘೋಷಣೆಯಾಗಿರುವುದರಿಂದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿವೆ.
ಸತ್ಯ ಜ್ಯೋತಿ ಫಿಲಂಸ್ ಮತ್ತು ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ಸೆಂಧಿಲ್ ತ್ಯಾಗರಾಜನ್, ಅರ್ಜುನ್ ತ್ಯಾಗರಾಜನ್ ನಿರ್ಮಾಣ ಮಾಡಿದ್ದಾರೆ. ವಿಜಯ್ ಕಾರ್ತಿಕೇಯ ಚಿತ್ರಕಥೆ ಮತ್ತು ನಿರ್ದೇಶನ ಮಾಡಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣ, ಅಜನೀಶ್ ಬಿ. ಲೋಕನಾಥ್ ಸಂಗೀತ ನೀಡಿದ್ದಾರೆ.
ಸ್ಟಂಟ್ ಸಿಲ್ವಾ, ಸುಪ್ರೀಮ್ ಸುಂದರ್, ರವಿ ವರ್ಮಾ, ಕೆವಿನ್ ಕುಮಾರ್, ವಿಕ್ರಮ್ ಮೋರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.
