ಬೆಂಗಳೂರು: ಮಹಿಳೆಯರ ಉಚಿತ ಪ್ರಯಾಣದ ‘ಶಕ್ತಿ’ ಯೋಜನೆಯ ಬಗ್ಗೆ ಚಾಲಕರು, ನಿರ್ವಾಹಕರು ಅಪಪ್ರಚಾರ ಮಾಡುವುದನ್ನು ತಡೆಯಲು ತಮ್ಮ ವಿಭಾಗ ವ್ಯಾಪ್ತಿಯ ಘಟಕಗಳ ಸಿಬ್ಬಂದಿಗೆ ಸೂಕ್ತ ತಿಳಿವಳಿಕೆ ನೀಡುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ(KKRTC) ಸೂಚನೆ ನೀಡಿದೆ.
ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿಗೊಳಿಸಿದೆ. ಆದರೆ, ಈ ಯೋಜನೆ ಕುರಿತಂತೆ ನಿಗಮದ ಚಾಲಕರು, ನಿರ್ವಾಹಕರು ಕರ್ತವ್ಯದ ಸಮಯದಲ್ಲಿ ಅಪಪ್ರಚಾರ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ.
ಈ ಹಿನ್ನೆಲೆಯಲ್ಲಿ ಯೋಜನೆಯ ಬಗ್ಗೆ ವಿಭಾಗೀಯ ನಿಯಂತ್ರಣ ಅಧಿಕಾರಿಗಳು ತಮ್ಮ ವಿಭಾಗದಲ್ಲಿರುವ ಚಾಲನಾ ಸಿಬ್ಬಂದಿಗೆ ಸೂಕ್ತ ತಿಳಿವಳಿಕೆ ನೀಡಬೇಕು. ಇದನ್ನು ಮೀರಿ ಮಾತನಾಡುವುದು ಕಂಡುಬಂದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆದೇಶಿಸಲಾಗಿದೆ.
