HomeLatest Newsನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿ 128 ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ: ಸರ್ಕಾರ ಆದೇಶ

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿ 128 ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ: ಸರ್ಕಾರ ಆದೇಶ

ಬೆಂಗಳೂರು: ಚುನಾಯಿತ ಕೌನ್ಸಿಲ್ ಅವಧಿ ಮುಗಿದ ರಾಜ್ಯದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯ್ತಿಗಳಿಗೆ ಆಡಳಿತಾಧಿಕಾರಿಗಳ ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ನ್ಯಾಯಾಲಯದಲ್ಲಿನ ಪ್ರಕರಣ ಸೇರಿದಂತೆ ಮತ್ತಿತರ ಕಾರಣಗಳಿಂದಾಗಿ ಚುನಾವಣೆಯ ಮೂಲಕ ಚುನಾಯಿತ ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಗದ 42 ನಗರಸಭೆ, 53 ಪುರಸಭೆ, 23 ಪಟ್ಟಣ ಪಂಚಾಯಿತಿ ಸೇರಿದಂತೆ ಒಟ್ಟು 128 ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ನಗರಸಭೆಗಳಿಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪುರಸಭೆಗಳಿಗೆ ಉಪ ವಿಭಾಗಾಧಿಕಾರಿಗಳು, ಪಟ್ಟಣ ಪಂಚಾಯ್ತಿಗಳಿಗೆ ತಹಶೀಲ್ದಾರ್ ಅವರನ್ನು ಆಡಳಿತಾಧಿಕಾರಿಗಳಾಗಿ ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular