HomeLatest NewsWeather Report: ತಗ್ಗಿದ ಮಳೆಯ ಪ್ರಮಾಣ: ಶೀತ ಗಾಳಿ ಆರಂಭ; ಹಲವೆಡೆ ಒಣಹವೆ; ಕೆಲವೆಡೆ ಮಳೆ

Weather Report: ತಗ್ಗಿದ ಮಳೆಯ ಪ್ರಮಾಣ: ಶೀತ ಗಾಳಿ ಆರಂಭ; ಹಲವೆಡೆ ಒಣಹವೆ; ಕೆಲವೆಡೆ ಮಳೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಪ್ರಮಾಣ ತಗ್ಗಿದೆ. ಕೆಲವೆಡೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಕೊಂಚ ಚಳಿ ಗಾಳಿ ಆರಂಭವಾಗಿದ್ದು, ಅಲ್ಲಲ್ಲಿ ಇಬ್ಬನಿಯ ಸಿಂಚನ ಆರಂಭವಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಚಿಕ್ಕಮಗಳುರು, ಶಿವಮೊಗ್ಗ, ಚಿತ್ರದುರ್ಗ ಜಿಲ್ಲೆಗಳಲ್ಲಿಯೂ ಒಣಹವೆ ಇರಲಿದೆ.

ಗದಗ, ಕೋಲಾರ, ಕೊಡಗು, ಬೆಂಗಳೂರು ನಗರ, ಹಾವೇರಿ, ಧಾರವಾಡ, ಬೆಂಗಳೂರು ಗ್ರಾಮಾಂತರ, ರಾಯಚೂರು ಜಿಲ್ಲೆಯ ಕೆಲ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular