ನವದೆಹಲಿ: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಂಡಿದೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಗ್ಯಾಂಗ್ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದೆ. ಪವಿತ್ರಾ ಗೌಡಗೆ ಸೆರೆವಾಸವೇ ಗತಿಯಾಗಿದೆ.
