ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು, ಅಪರಾಧಿಗಳು ಮೊಬೈಲ್ ನಲ್ಲಿ ಮಾತನಾಡುತ್ತ, ಬಿಂದಾಸಾಗಿ ಇರುವ ದೃಶ್ಯ ಸಾಮಾಜಿಕ ಜಾಲತಾಣಗಲ್ಲಿ ವೈರಲ್ ಆಗಿತ್ತು. ಈ ಘಟನೆ ಬೆನ್ನಲ್ಲೇ ಕಾರಾಗೃಹ ಎಡಿಜಿಪಿ ಬಿ.ದಯಾನಂದ್ ಎಚ್ಚೆತ್ತುಕೊಂಡಿದ್ದಾರೆ.
ರೇಪಿಸ್ಟ್ ಉಮೇಶ್ ರೆಡ್ಡಿ, ಭಯೋತ್ಪಾದನೆ ಕೃತ್ಯದಲ್ಲಿ ಜೈಲು ಸೇರಿರುವ ಉಗ್ರ ಕೈದಿಗಳು, ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್ ಸೇರಿದಂತೆ ಹಲವು ಅಪರಾಧಿಗಳಿಗೆ ಜೈಲಿನಲ್ಲಿ ಮೊಬೈಲ್, ಟಿವಿ ಸೇರಿದಂತೆ ಇನ್ನಿತರ ಸೌಲಭ್ಯ ಒದಗಿಸಿರುವುದು ಬೆಳಕಿಗೆ ಬಂದ್ದೆ. ಜೈಲು ಶಿಕ್ಷೆ ಅನುಬಸಬೇಕಿದ್ದ ಅಪರಾಧಿಗಳು ಮನೆಯ ರೀತಿಯಲ್ಲಿ ರಾಜಾತಿಥ್ಯ ಪಡೆಯುತ್ತಿದ್ದಾರೆ. ಬಿಂದಾಅಸ್ ಆಗಿ ಮೊಬೈಲ್ ನಲ್ಲಿ ಗಂಟೆಗಟ್ಟಲೆ ಮಾತನಾಡುತ್ತಾ, ಟಿವಿ ನೋಡುತ್ತಾ ಆರಾಮವಾಗಿ ಕಾಲಕಳೆಯುತ್ತಿದ್ದಾರೆ.
ಸಾಮಾಜಿಕ ತಾಣ, ಮಾಧ್ಯಮಗಳಲ್ಲಿ ಈ ಕುರಿತ ವಿಡಿಯೋ ವೈರಲ್ ಆಗುತ್ತಿದ್ದಂತೆ ಕಾರಾಗೃಹ ಎಡಿಜಿಪಿ ಬಿ.ದಯಾನಂದ್, ಜೈಲಿನಲ್ಲಿ ಪರಿಶೀಲನೆ ನಡೆಸುವಂತೆ ಜೈಲು ಅಧಿಕಾರಿಗಳು, ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದಾರೆ.
