HomeLatest NewsBREAKING: ಹತ್ತರಗಿಯಲ್ಲಿ ಪ್ರತಿಭಟನೆ ವೇಳೆ ಕಲ್ಲು ತೂರಾಟ ಪ್ರಕರಣ: 11 ಜನರ ವಿರುದ್ಧ FIR ದಾಖಲು

BREAKING: ಹತ್ತರಗಿಯಲ್ಲಿ ಪ್ರತಿಭಟನೆ ವೇಳೆ ಕಲ್ಲು ತೂರಾಟ ಪ್ರಕರಣ: 11 ಜನರ ವಿರುದ್ಧ FIR ದಾಖಲು

ಬೆಳಗಾವಿ: ಬೆಳಗಾವಿ ಜಿಲ್ಲೆಯ ಹತ್ತರಗಿಯಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಕಲ್ಲು ತೂರಾಟ ಪ್ರಕರಣ ಸಂಬಂಧ 11 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ರೈತರ ಪ್ರತಿಭಟನೆಯ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ 6 ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದರು. ಘಟನೆಗೆ ಸಂಬಂಧಿಸಿದಂತೆ ಯಮಕನಮರಡಿ ಠಾಣೆಯಲ್ಲಿ 11 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಪಿಎಸ್ಐ ಆರ್.ವಿ.ಪಾಟೀಲ್ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರತಿಭಟನೆಯ ವೇಳೆ ಪೊಲೀಸರನ್ನು ಕೊಲೆ ಮಾಅಡುವ ಉದ್ದೇಶದಿಂದ ಕಲ್ಲು ತೂರಾಟ ನಡೆಸಿ, ಪೊಲೀಸರನ್ನು ಒದ್ದು ಹಲ್ಲೆ ಮಾಡಲಾಗಿದೆ. ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿಯುಂಟು ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular