ಶೃಂಗೇರಿ : ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಪಲ್ಟಿಯಾಗಿ ಐವರ ಸ್ಥಿತಿ ಚಿಂತಾಜನಕವಾಗಿದ್ದು, 11 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಾವಡಿ ಸಮೀಪ ಈ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ವಾಸವಿ ಕಾಲೇಜಿನಿಂದ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಶೃಂಗೇರಿ ಬಂದಿದ್ದರು. ಬಸ್ ನಲ್ಲಿ ಶಿಕ್ಷಕರು ಸೇರಿ ಸುಮಾರು 25 ಕ್ಕೂ ಹೆಚ್ಚು ಜನ ಬಂದಿದ್ದರು. ಕಾವಡಿ ಸಮೀಪ ಬರುವಾಗ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
