ಹೈದರಾಬಾದ್: ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣತಪ್ಪಿದ ಕಾರು ಜನರ ಮೇಲೆ ಹರಿದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಜಗ್ಗಂಪೇಟ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಕಾರಿನ ಟೈರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬೈಕ್ ಹಾಗೂ ಆಟೋಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರು ಬಸ್ ನಿಲ್ದಾಣಕ್ಕೆ ನುಗ್ಗಿದ್ದು, ಜನರ ಮೇಲೆ ಹರ್ದಿದೆ. ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.
ಮೃತರನ್ನು ಮೊರ್ತಾ ಆನಂದರಾವ್, ಮೊರ್ತಾ ಕೊಂಡಯ್ಯ ಹಾಗೂ ಕಾಕಡ ರಾಜು ಎಂದು ಗುರುತಿಸಲಾಗಿದೆ. ಮೂವರೂ ಸೋಮವಾಡ ಗ್ರಾಮದ ನಿವಾಸಿಗಳಾಗಿದ್ದಾರೆ. ಸ್ಥಳೀಯ ಶಾಸಕ ಜ್ಯೋತುಲಾ ನೆಹರು ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
