ಲಖನೌ: 14 ವರ್ಷದ ಅಪ್ರಾಪ್ತನೊಬ್ಬ 40 ವರ್ಷದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಸಹಕರಿಸದಿದ್ದಾಗ ಆಕೆಯನ್ನೇ ಹತ್ಯೆಗೈದಿರುವ ಘೋರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಇಲ್ಲಿನ ಹಮೀದ್ ಪುರದಲ್ಲಿ ಈ ಘಟನೆ ನಡೆದಿದ್ದು, ನವೆಂಬರ್ 3ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಹಿಳೆ ಹೊಲದಲ್ಲಿ ಹುಲ್ಲು ಕತ್ತರಿಸುತ್ತಿದ್ದ ವೇಳೆ ಅಪ್ರಾಪ್ತ ಬಾಲಕ ಮಹಿಳೆ ಮೇಲೆ ಹಲ್ಲೆ ನಡೆಸಿ ಲೈಂಗಿಕ ದೌರ್ಜನ್ಯವೆಸಗಲು ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ವಿರೋಧಿಸಿದ್ದಾಳೆ.
ಮಹಿಳೆ ವಿರೋಧಿಸುತ್ತಿದಂತೆ ಕತ್ತಿಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ರಕ್ತದ ಮಡುವಲ್ಲಿ ಬಿದ್ದಿದ್ದ ಮಹಿಳೆಯನ್ನು ಗ್ರಾಮಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಚಂಡೀಗಢ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿದ್ದಾರೆ.
ಸದ್ಯ ಆರೋಪಿ ಅಪ್ರಾಪ್ತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಹಮೀದ್ ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
