ಕೋಲಾರ: ಸರ್ಕಾರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷಕ್ಕೆ ಆಗತಾನೆ ಹುಟ್ಟಿದ ಶಿಶು ಬಲಿಯಾಗಿರುವ ಆರೋಪ ಕೇಳಿಬಂದಿದೆ. ಕೋಲಾರದಲ್ಲಿ ಈ ಘಟನೆ ನಡೆದಿದೆ.
ಕೋಲಾರ ತಾಲೂಕಿನ ಗುಟ್ಟಹಳ್ಳಿ ಆರೋಗ್ಯ ಕೇಂದ್ರದಲ್ಲಿ ಈ ದುರಂತ ಸಂಭವಿಸಿದೆ. ಹೆರಿಗೆಗೆ ಬಂದಿದ್ದ ಮಹಿಳೆಯೊಬ್ಬರು ಆಗತಾನೆ ಆಸ್ಪತ್ರೆ ಮಗುವಿಗೆ ಜನ್ಮ ನೀಡಿದ್ದಾರೆ. ಹುಟ್ಟಿದ ಮಗು ಏಕಾಏಕಿ ಮೃತಪಟ್ಟಿದ್ದು, ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ವೈದ್ಯರ ನಿರ್ಲಕ್ಷವೇ ನವಜಾತ ಶಿಶುವಿನ ಸಾವಿಗೆ ಕಾರಣ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಾ.ನಾಗಮಣಿ ಹಾಗೂ ನರ್ಸ್ ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
