ಬೆಳಗಾವಿ: ಕಬ್ಬಿಗೆ 3500 ರೂಪಾಯಿ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆಗೆ ಮಣಿದಿರುವ ರಾಜ್ಯ ಸರ್ಕಾರ ಬೆಲೆ ನಿಗದಿಗೆ ನಿರ್ಧರಿಸಿದೆ.
ಪ್ರತಿ ಟನ್ ಕಬ್ಬಿಗೆ 3300 ರೂಪಾಯಿ ಬೆಲೆ ನಿಗದಿಗೆ ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಈ ಬಗ್ಗೆ ಅಧಿಕೃತ ಆದೇಶ ಪತ್ರ ಹೊರಡಿಸಿದೆ. ಸಕ್ಕರೆ ಸಚಿವ ಶಿವಾನಂದ ಪಾಟೀಲ್, ಬೆಳಗಾವಿ ಗುರ್ಲಾಪುರದಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ತೆರಳಿ ರೈತ ಮುಖಂಡ ಚೂನಪ್ಪ ಪೂಜಾರಿ ಅವರುಗೆ ಸರ್ಕಾರದ ಆದೇಶ ಪತ್ರ ನೀಡಿದರು. ಕಬ್ಬು ಬೆಳೆಗೆ ಬೆಲೆ ನಿಗದಿಗೆ ಸರ್ಕಾರ ಒಪ್ಪಿದ್ದು, ಹೋರಾಟ ಕೈಬಿಡುವಂತೆ ತಿಳಿಸಿದರು.
ಸರ್ಕಾರದ ಆದೇಶ ಪ್ರತಿ ಸಿಗುತ್ತಿದಂತೆಯೇ ಕಬ್ಬು ಬೆಳೆಗಾರರು ಪ್ರತಿಭಟನೆ ಹಿಂಪಡೆದಿದ್ದಾರೆ. ರೈತರ ಹೋರಾಟಕ್ಕೆ ಸರ್ಕಾರ ಮಣಿದಿದ್ದು, ಇದು ರೈತರ ಹೋರಾಟಕ್ಕೆ ಸಿಕ್ಕ ಗೆಲುವು ಎಂದು ಸಚಿವ ಶಿವಾನಂದ ಪಾಟೀಲ್ ಅವರ ಮೇಲೆ ಪುಷ್ಪ ಮಳೆಗರೆದು ಸಂಭ್ರಮಿಸಿದರು.
