ಬೆಂಗಳೂರು: ರಾಜ್ಯದ 8 ಸರ್ಕಾರಿ ಜಿಲ್ಲಾಸ್ಪತ್ರೆಗಳಲ್ಲಿ 2026- 27ನೇ ಶೈಕ್ಷಣಿಕ ಸಾಲಿನಿಂದ ಎಂಡಿ/ ಎಂಎಸ್ ಕೋರ್ಸ್ ಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ.
ಬೆಂಗಳೂರಿನ ಜಯನಗರದ ಸಾರ್ವಜನಿಕ ಆಸ್ಪತ್ರೆ, ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆ, ವಿಜಯಪುರ, ತುಮಕೂರು, ಬಾಗಲಕೋಟೆ, ರಾಮನಗರ, ಕೋಲಾರ, ಮೈಸೂರು ಜಿಲ್ಲಾಸ್ಪತ್ರೆಗಳಲ್ಲಿ ಎಂಡಿ/ ಎಂಎಸ್ ಕೋರ್ಸ್ ಗಳನ್ನು ಪ್ರಾರಂಭಿಸಲು ಅರ್ಹವಾಗಿವೆ.
ಇದರ ಸಂಪೂರ್ಣ ಸಂಯೋಜನೆ ಮತ್ತು ಅನುಷ್ಠಾನದ ಜವಾಬ್ದಾರಿಯನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರಿಗೆ ನೀಡಲಾಗಿದೆ. ಯೋಜನೆಗೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆಯು ಬೋಧಕ ವರ್ಗದ ಹುದ್ದೆ ಸಮಾನತೆ, ಡಿಎನ್ಬಿ ಉಪನ್ಯಾಸಕರ ಬಳಕೆ, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಮತ್ತು ರಾಷ್ಟ್ರೀಯ ವೈದ್ಯಕೀಯ ಆಯೋಗ ಮೂಲಕ ಎನ್ಒಸಿ ಮತ್ತು ಪರಿಶೀಲನೆ ಪ್ರಕ್ರಿಯೆಗಳಿಗೆ ಅನುಕೂಲವಾಗುವಂತೆ ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ.
