ಬಾಗಲಕೋಟೆ: ಕಬ್ಬು ಬೆಳೆಗಾರರ ನಿರಂತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 3300 ರೂಪಾಯಿ ಬೆಲೆ ನಿಗದಿ ಮಾಡಿ ಮಾಡಿದರೂ ಬಾಗಲಕೋಟೆಯಲ್ಲಿ ಕಬ್ಬು ಬೆಳೆಗಾರರ ಹೋರಾಟ ಮುಂದುವರೆದಿದೆ.
ಬಾಗಲಕೋಟೆ ಜಿಲ್ಲೆಯ ಮುದೋಳ ಭಾಗದ ರೈತರು ಪ್ರತಿಭಟನೆ ಮುಂದುವರೆಸಿದ್ದಾರೆ. ಟನ್ ಕಬ್ಬಿಗೆ 3500 ರೂಪಾಯಿ ದರ ನಿಗದಿ ಮಡಲೇಬೇಕು ಎಂದು ಪಟ್ಟು ಹಿಡಿದ್ದಿದ್ದಾರೆ. ಮುದೋಳದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ರೈತರು ಧರಣಿ ನಡೆಸಿದ್ದಾರೆ.
ಸರ್ಕಾರ ರಿಕವರಿ ಆಧಾರದ ಮೇಲೆ ನಿಗದಿ ಮಾಡಿರುವ ಬೆಲೆ ನಮಗೆ ಬೇಡ. ರಿಕವರಿಯಲ್ಲಿಯೇ ರೈತರಿಗೆ ಮಹಾಮೋಸ ನಡೆಯುತ್ತಿದೆ. ಪ್ರತಿ ಟನ್ ಕಬ್ಬಿಗೆ 3500 ರೂಪಾಯಿ ದರ ನಿಗದಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
