ಮಡಿಕೇರಿ: ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗೆ 12,000 ಮತ್ತು ಅನುದಾನಿತ ಶಾಲೆಗಳಿಗೆ 6,000 ಸೇರಿ 18,000 ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ನಡೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪದ ಬೇLUರು ಕುಸುಬೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾತನಾಡಿದ ಸಚಿವರು, ಸರ್ಕಾರಿ ಶಾಲೆಗಳನ್ನು ಬlಪಡಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅನೇಕ ಕಾರ್ಯಕ್ರಮ ರೂಪಿಸಿದೆ. ಈ ನಿಟ್ಟಿನಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 900 ಕೆಪಿಎಸ್ ಶಾಲೆ ಆರಂಭಿಸಲು ಮಂಜೂರಾತಿ ನೀಡಲಾಗಿದೆ. ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಿದ್ದು, ಅಗತ್ಯವಿರುವ ಕಡೆ ಹೊಸ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಉಚಿತ ವಿದ್ಯುತ್ ನೀಡಲಾಗುತ್ತಿದೆ. ವಿಶೇಷ ತರಗತಿಗಳನ್ನು ನಡೆಸಿ ಫಲಿತಾಂಶ ಹೆಚ್ಚಳಕ್ಕೆ ಗಮನಹರಿಸಲಾಗಿದೆ ಎಂದು ಹೇಳಿದ್ದಾರೆ.
