HomeLatest Newsಬಾಲಕಿ ಗರ್ಭಿಣಿಯಾಗಲು ಕಾರಣನಾದವನಿಗೆ ಬಿಗ್ ಶಾಕ್: 20 ವರ್ಷ ಕಠಿಣ ಜೈಲು ಶಿಕ್ಷೆ

ಬಾಲಕಿ ಗರ್ಭಿಣಿಯಾಗಲು ಕಾರಣನಾದವನಿಗೆ ಬಿಗ್ ಶಾಕ್: 20 ವರ್ಷ ಕಠಿಣ ಜೈಲು ಶಿಕ್ಷೆ

ದಾವಣಗೆರೆ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆ ಗರ್ಭಿಣಿಯಾಗಲು ಕಾರಣನಾದ ಅಪರಾಧಿಗೆ ದಾವಣಗೆರೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ- 1 ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ 35,000ರೂ. ದಂಡ ವಿಧಿಸಿದೆ.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಜಿ. ಕಡದಕಟ್ಟೆ ಗ್ರಾಮದ ಎನ್. ಚಂದ್ರಪ್ಪ(25) ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ. ನ್ಯಾಮತಿ ತಾಲೂಕಿನ ಗ್ರಾಮವೊಂದರ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿ ಬಾಲಕಿ ಗರ್ಭಿಣಿಯಾಗಲು ಕಾರಣನಾಗಿದ್ದ. ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿ ಬಾಲಕಿಯನ್ನು ಪೋಷಕರಿಗೆ ಒಪ್ಪಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular