ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದೇ ವೇಳೆ ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಕೈದಿಗಳಿಗೆ ಸವಲತ್ತು ಒದಗಿಸಲು ಅವಕಾಶ ನೀಡಿದವರ ವಿರುದ್ಧವೂ ಕ್ರಮಕ್ಕೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ರಜೆಯ ಮೇಲೆ ತೆರಳಿದ್ದರು. ನಾಳೆ ಗೃಹ ಸಚಿವರು ಈ ಬಗ್ಗೆ ಸಭೆ ಕರೆದಿದ್ದಾರೆ. ತಪ್ಪು ಮಾಡಿದವರ ಮೇಲೆ ಗಂಭೀರ ಕ್ರಮ ಕೈಗೊಳ್ಳಲಾಗುವುದು ಹಾಗೂ ಇನ್ನೂ ಮುಂದೆ ಇಂಥದ್ದು ನಡೆಯದಂತೆ ಕ್ರಮ ವಹಿಸಲಾಗುವುದು ಎಂದರು.
You Might Also Like
TAGGED:ಸಿದ್ದರಾಮಯ್ಯ
