ನಟ ಹಾಗೂ ‘ಬಿಗ್ ಬಾಸ್’ ಮಾಜಿ ಸ್ಪರ್ಧಿ ಉಗ್ರಂ ಮಂಜು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸಂಧ್ಯಾ ಖುಷಿ ಅವರೊಂದಿಗೆ ಉಗ್ರಂ ಮಂಜು ನಿಶ್ಚಿತಾರ್ಥ ಮಾಡಿಕೊಂಡಿದ್ದು, ಬಂಧುಗಳು ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ನೆರವೇರಿದೆ.
ಈ ಬಗ್ಗೆ ಸಂತಸ ಹಂಚಿಕೊಂಡಿರುವ ಮಂಜು ಬದುಕಿನ ಹೊಸ ಅಧ್ಯಾಯ ಆರಂಭವಾಗಿದೆ. ನಿಮ್ಮ ಆಶೀರ್ವಾದ ನಮ್ಮ ಮೇಲಿರಲಿ. ದೇವರ ಕೃಪೆಯಿಂದ ಕುಟುಂಬದ ಆಶೀರ್ವಾದದಿಂದ ನಾವು ಹೊಸ ಜೀವನದ ಹೊಸ ಹಾದಿಗೆ ಕಾಲಿಟ್ಟಿದ್ದೇವೆ. ಹೊಸ ಬಂಧದ ಆರಂಭ. ನಿಶ್ಚಿತಾರ್ಥದ ಸುಂದರ ಕ್ಷಣ ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳುತ್ತಿದ್ದೇವೆ ಎಂದು ಪೋಸ್ಟ್ ಹಾಕಿದ್ದಾರೆ.
ಸಂಧ್ಯಾ ಅವರು ಸ್ಪರ್ಶ್ ಆಸ್ಪತ್ರೆಯಲ್ಲಿ ಟ್ರಾನ್ಸ್ ಪ್ಲಾಂಟ್ ವಿಭಾಗದಲ್ಲಿ ಕೋ ಆರ್ಡಿನೇಟರ್ ಆಗಿ ಕಾಯರ್ನಿರ್ವಹಿಸುತ್ತಿದ್ದಾರೆ. ವೈದ್ಯಕೀಯ ವೃತ್ತಿಯವರಾಗಿರುವ ಅವರು ಅಂಗಾಂಗ ಕಸಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಜನವರಿಯಲ್ಲಿ ಉಗ್ರಂ ಮಂಜು ಮತ್ತು ಸಂಧ್ಯಾ ಅವರ ಮದುವೆ ನಡೆಯಲಿದೆ ಎನ್ನಲಾಗಿದೆ.
