ಪಾಟ್ನಾ: ಬಿಹಾರದ ಪಾಟ್ನಾ ಜಿಲ್ಲೆಯ ದಾನಾಪುರ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ಮಲಗಿದ್ದಾಗ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ಕನಿಷ್ಠ ಐವರು ಸದಸ್ಯರು ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಅಕಿಲ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮಾನಸ್ ಗ್ರಾಮದಲ್ಲಿ ಈ ದುರಂತ ಘಟನೆ ಸಂಭವಿಸಿದೆ.
ಕುಸಿದ ಮನೆಯನ್ನು ಇಂದಿರಾ ಆವಾಸ್ ಯೋಜನೆಯಡಿ ನಿರ್ಮಿಸಲಾಗಿದೆ. ಬಿಹಾರದ ದಾನಾಪುರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ಐವರು ಸದಸ್ಯರು ನಿದ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಕುರಿತಾಗಿ ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
