ಬೆಂಗಳೂರು : ಆಟೋ ಪಲ್ಟಿಯಾಗಿ ಗಾಯಗೊಂಡ ವ್ಯಕ್ತಿ ಒದ್ದಾಡಿ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆದರೆ ಸ್ನೇಹಿತನನ್ನ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.
ಮೈಕ್ರೋ ಲೇಔಟ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.
ಏನಿದು ಘಟನೆ
ಸರಕು ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಆಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕನ ಎಡಭಾಗದಲ್ಲಿ ಕುಳಿತಿದ್ದ ವ್ಯಕ್ತಿಯ ಮೇಲೆ ಆಟೋ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ವೇಳೆ ಸ್ಥಳೀಯರ ನೆರವಿನಿಂದ ಆಟೋ ವನ್ನ ಮೇಲಕ್ಕೆ ಎತ್ತಲಾಗಿದ್ದು, ಗಾಯಗೊಂಡ ವ್ಯಕ್ತಿಯನ್ನ ಫುಟ್ ಬಾತ್ ನಲ್ಲಿ ಕೂರಿಸಲಾಗಿದೆ. ನಂತರ ಸ್ಥಳೀಯರು ಕೂಡ ಸ್ಥಳದಿಂದ ತೆರಳಿದ್ದಾರೆ. ಸಾವು ಬದುಕಿನ ನಡುವೆ ಒದ್ದಾಡುತ್ತಿದ್ದ ವ್ಯಕ್ತಿಯನ್ನ ಅಲ್ಲಿಯೇ ಬಿಟ್ಟು ಚಾಲಕ ಕೂಡ ಆಟೋ ಸಮೇತ ಎಸ್ಕೇಪ್ ಆಗಿದ್ದಾನೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಒದ್ದಾಡಿ ಒದ್ದಾಡಿ ಪ್ರಾಣ ಬಿಟ್ಟಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿ ಆಟೋ ಚಾಲಲನ ಪತ್ತೆಗೆ ಮುಂದಾಗಿದ್ದಾರೆ.
