ಶಿವಮೊಗ್ಗ: ಮಾರಕಾಸ್ತ್ರದಿಂದ ಕೊಚ್ಚಿ ಮಹಿಳೆ ಕೊಲೆ ಮಾಡಿದ ಘಟನೆ ಶಿವಮೊಗ್ಗ ಹೊರ ವಲಯದ ಸಿದ್ಧೇಶ್ವರ ನಗರದಲ್ಲಿ ನಡೆದಿದೆ.
ಗಂಗಮ್ಮ(45) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. ಶಿವಮೊಗ್ಗ ತಾಲೂಕಿನ ದುಮ್ಮಳ್ಳಿಯ ಸಿದ್ದೇಶ್ವರ ನಗರದಲ್ಲಿ ಘಟನೆ ನಡೆದಿದೆ. ಹಳೆದ್ವೇಷದ ಹಿನ್ನೆಲೆಯಲ್ಲಿ ಗಂಗಮ್ಮ ಅವರನ್ನು ಮಾರಕಾಸ್ತ್ರಗಳಿಂದ ಥಳಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ನಾಗೇಶ್ ನಾಯ್ಕ್, ಹರೀಶ್ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
