ಬಾಗಲಕೋಟೆ: ಟನ್ ಕಬ್ಬಿಗೆ ರಾಜ್ಯ ಸರ್ಕಾರ 3300 ರೂಪಾಯಿ ಬೆಲೆ ನಿಗದಿ ಮಾಡಿದ್ದರೂ ತಣ್ಣಗಾಗದ ರೈತರ ಆಕ್ರೋಶ ಮತ್ತೆ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಬಾಗಲಕೋಟೆ ಜಿಲ್ಲೆಯ ಮುದೋಳದಲ್ಲಿ ಕಬ್ಬು ಬೆಳೆಗಾರರು ಹೋರಾಟ ಮುಂದುವರೆಸಿದ್ದಾರೆ.
ಒಂದು ಟನ್ ಕಬ್ಬಿಇಗೆ 3500 ರೂಪಾಯಿ ಬೆಲೆ ನಿಗದಿ ಮಾಡಲೇಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಮುಂದುವರೆಸಿದ್ದು, ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ.
ಕಬ್ಬು ಬೆಳೆಗಾರರ ಮುಖಂಡರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಜಿಲ್ಲಾಧಿಕಾರಿ ಸಭೆ ನಡೆಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕಬ್ಬು ಬೆಳೆಗೆ 3300 ರೂಪಾಯಿ ದರ ನಿಗದಿ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಈ ಆದೇಶಕ್ಕೆ ಕಾರ್ಖಾನೆ ಮಾಲೀಕರು ಒಪ್ಪಿದರೂ ಕಬ್ಬು ಬೆಳೆಗಾರರು ಮಾತ್ರ ಒಪ್ಪುತ್ತಿಲ್ಲ. ಜಿಲ್ಲಾಧಿಕಾರಿಗಳ ಮನವೊಲಿಕೆಗೂ ರೈತರು ಬಗ್ಗಿಲ್ಲ. ಸಚಿವ ಆರ್,ಬಿ.ತಿಮ್ಮಾಪುರ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ವಿಫಲವಾಗಿದೆ. ಮುದೋಳದಲ್ಲಿ ರೈತರ ಹೋರಾಟ ಮುಂದುವರೆದಿದೆ.
