ಮೈಸೂರು: ಮೈಸೂರಿನ ಖಾಸಗಿ ಶಾಲೆಯ ಬಾಲಕನ ಮೇಲೆ ವಿದ್ಯಾರ್ಥಿಗಳಿಂದ ರ್ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮೈಸೂರಿನ ಖಾಸಗಿ ಶಾಲೆಯ 14 ವರ್ಷದ ಬಾಲಕನ ಮೇಲೆ ಸಹಪಾಠಿಗಳೇ ಹಲ್ಲೆ ನಡೆಸಿ, ಮರ್ಮಾಂಗಕ್ಕೆ ಒದ್ದು ಹಿಂಸಿಸಿದ್ದರು. ಗಂಭೀರವಾಗಿ ಹಲ್ಲೆಗೊಳಗಾಗಿರುವ ಬಾಲಕ ಆಸ್ಪತ್ರೆಗೆ ದಾಖಲಾಗಿದ್ದಾನೆ. ಬಾಲಕನ ತಾಯಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಮೂವರು ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
